ಕೋಲು ಕೋಲಣ್ಣ ಕೋಲು ಬಣ್ಣದ್ ಕೋಲೆ ಹೋಯ್
ಮಂಗನ ಕೈಲಿ ಮಾಣಿಕ್ಯ ಕೊಟ್ಟರೆ
ಅಂಗಕೆ ಒರೆಸಿ ನೋಡಿತದು
ಕಂಗಳಿಗೇನೂ ಕಾಣದೆ ಇರಲು
ಮುಂಗಡೆಗೆಲ್ಲೋ ಎಸೆಯಿತದು ಹೋಯ್ |
ಕೋಲು ಕೋಲಣ್ಣ ಕೋಲು ಬಣ್ಣದ್ ಕೋಲೆ ಹೋಯ್ || ಪ||
ಬೆಂಗಳೂರ ಜನ ಮೊಬೈಲು ಸಿಕ್ಕರೆ
ಪುಂಗಿಯ ಮುಂದಿನ ಹಾವಂತೇ
ತಿಂಗಳ ಬೆಳಕಲೋ ಬಿರುಬಿಸಿಲಲ್ಲೋ
ಭಂಗವಿರದೆ ಮಾತನಾಡುವರು ಹೋಯ್ |
ಕೋಲು ಕೋಲಣ್ಣ ಕೋಲು ಬಣ್ಣದ್ ಕೋಲೆ ಹೋಯ್ || ೧ ||
ಬಂಗಾಳಿಗಳು ಬಿಹಾರಿಗಳು ತಾವ್
ಸಂಘವ ಕಟ್ಟಿ ಬಂದಿಹರು
ನಂಗಳಜನಗಳಿಗಿಲ್ಲದ ಕೆಲಸವ
ತಿಂಗಳೊಳಗೆ ಗಿಟ್ಟಿಸುತಿಹರು ಹೋಯ್ |
ಕೋಲು ಕೋಲಣ್ಣ ಕೋಲು ಬಣ್ಣದ್ ಕೋಲೆ ಹೋಯ್ || ೨ ||
ರಂಗಿನ ನಾರಿಯರೆಲ್ಲರು ರಂಜಿಸಿ
ಮುಂಗಡ ಸೇರುತ ಮಾಲ್ಗಳಲಿ
ತಂಗಿತಮ್ಮ ಬಳಗವ ಕರೆದೆಳೆಯುತ
ನಿಂಗೇನ್ ನೋಡು ಎನ್ನುತಲಿಹರು ಹೋಯ್ |
ಕೋಲು ಕೋಲಣ್ಣ ಕೋಲು ಬಣ್ಣದ್ ಕೋಲೆ ಹೋಯ್ || ೩ ||
’ಮಂಗಳ ಮುಖಿ’ಯರು ಕಂಡೆಡೆ ಚಾಚುತ
ಹಿಂಗೇನಾವಿರೋದು ಎನ್ನುತಲಿ
ಚಂಗನೆ ಜಿಗಿಯುತ ಹಲವರ ತಟ್ಟುತ
ಹೆಂಗಾದರೂ ಮಾಡಿ ಕೀಳುವರು ಹೋಯ್ |
ಕೋಲು ಕೋಲಣ್ಣ ಕೋಲು ಬಣ್ಣದ್ ಕೋಲೆ ಹೋಯ್ || ೪ ||
ಸಂಘಟಕರು ಕರೆಯೋಲೆಯ ಮುದ್ರಿಸಿ
ಬೆಂಗಡೆಯಲಿ ದೇಣಿಗೆ ಕೂಪನ್
ಮಂಗಳಮೂರುತಿ ಕೂರಿಸುವುದಕೆನೆ
ಅಂಗಳದಲಿ ಕರೆಯುತಲಿಹರು ಹೋಯ್ |
ಕೋಲು ಕೋಲಣ್ಣ ಕೋಲು ಬಣ್ಣದ್ ಕೋಲೆ ಹೋಯ್ || ೫ ||
ಅಂಗಿ ಪ್ಯಾಂಟನು ಕಿತ್ತೆಳೆದಾಡುತ
ನಂಗೇನ್ಕಮ್ಮಿ ಮಂತ್ರಿಯಮಾಡಿ
ಮಂಗನಮಾಡಿದಿರೆನ್ನುತ ಬೆಂಕಿಯ
ಕಂಗೆಡಿಸಲು ಹಚ್ನೋಡಿದರು ಹೋಯ್ |
ಕೋಲು ಕೋಲಣ್ಣ ಕೋಲು ಬಣ್ಣದ್ ಕೋಲೆ ಹೋಯ್ || ೬ ||
ಕಾಂಗೈ ದಳಗಳು ಕಮಲವ ಮುದುಡಿಸೆ
ಭಾಂಗೀಕಟ್ಟಲು ಶುರುವಿಟ್ಟು
ಸಾಂಗೋಪಾಂಗದಿ ನೆಂಟರೇ ಮೊದಲಲಿ !
ಮ್ಯಾಂಗೋ ಜೂಸನು ಕುಡಿದಿಹರು ಹೋಯ್ |
ಕೋಲು ಕೋಲಣ್ಣ ಕೋಲು ಬಣ್ಣದ್ ಕೋಲೆ ಹೋಯ್ || ೭ ||
ಮಂಗಳಕರುಮಾರಮ್ಮನ ಬೇಡುತ
ಹೆಂಗೋ ಮುಗಿಸಿರೆ ಸಂಪುಟವ
ಹಿಂಗೇ ಆದರೆ ನಮ್ ಸಂಪಂಗಿಯ
ಹೆಂಗ್ಬಿಡ್ತಾರೆಂದ್ರು ಕೋಲಾರದಲಿ ಹೋಯ್ |
ಕೋಲು ಕೋಲಣ್ಣ ಕೋಲು ಬಣ್ಣದ್ ಕೋಲೆ ಹೋಯ್ || ೮ ||
ಅಂಗದ ಜಾಂಬವ ಹನುಮರು ಜಿಗಿದರು
ಅಂಗಾಂಗಕೆ ಮಸ್ಸಾಜಿರದೇ !
ಹೆಂಗೈತೊಮ್ಮೆ ನೋಡಿರಿ ಎಂದರು
ಹಿಂಗಡೆ ಬೇರೆ ತೋರಿಸುತ ! ಹೋಯ್ |
ಕೋಲು ಕೋಲಣ್ಣ ಕೋಲು ಬಣ್ಣದ್ ಕೋಲೆ ಹೋಯ್ || ೯ ||
ವಿಆರ್ಬಿ ಸರ್,ಅಗ್ದೌವ್ರೆ ಎಲ್ಲೆಲ್ಲೂ
ReplyDeleteಬಿಗ್ದವ್ರೆ ಗಲ್ಲೀಲೂ
ಅದ್ರಾಗೆ ಕಾಣ್ತಾವೆ
ಮೋಟಾರ್ಕಾರು ಎಲ್ಲೆಲ್ಲೂ
ಕೋಲು ಕೋಲಣ್ಣ ಕೋಲೆ, ಮಳೆಬಂದ್ರೆ
ಬೆಂಗ್ಳೂರ್ ಬಣ್ಣ ಬಯಲಾಯ್ತು ಕೋಲು ಕೋಲಣ್ಣ ಕೋಲೆ...
ಬಹಳ ಚನ್ನಾಗಿ ಜನಪದ ಶೈಲಿಯ ವಾಸ್ತವ ಅನಾವರಣ
sir super...
ReplyDeleteಕೋಲು ಕೋಲಣ್ಣ ಕೋಲೆ....
swalpa politicians baggenu onderadu line haki sir...
ಭಟ್ರೇ, ಇದೊಂಥರಾ ಚೆನ್ನಾಗಿದೆ. ಮುಂದುವರಿಸಿ ....
ReplyDeleteಹೋಯ್.. ಚೆ೦ದ ಉ೦ಟು ಭಟ್ರೆ.. .."ಬೆಂಗಳೂರ ಜನ ಮೊಬೈಲು ಸಿಕ್ಕರೆ"...ಎಲ್ಲ ಊರಿನಲ್ಲೂ.. ಅಷ್ಟೆ.. ಪು೦ಗಿಯ ಮು೦ದಿನ ಹಾವ೦ತಾಗುವರು..ಹೋಯ್..
ReplyDeleteಅನ೦ತ್
ಕೋಲು ಹಾಕುತಿಹ ಭಟ್ಟರ ಜೊತೆಗೆ
ReplyDeleteನಾವೂ ಸೇರುವೆವು
ಅಣಕು ಪದಗಳನು ಕೆಣಕುತ ಮತ್ತೆ
ಕುಣಿಯುತ ಹಾಡುವೆವು.
ಕೋಲು ಕೋಲಣ್ಣ ಕೋಲೆ!
ಪ್ರತಿಕ್ರಿಯಿಸಿದ ಎಲ್ಲರಿಗೂ ಅನೇಕ ಕೃತಜ್ಞತೆಗಳು
ReplyDeleteಚೆಂದಡ ಅಣುಕು -ಅದೂ ಜಾನಪದ ಶೈಲಿಯಲ್ಲಿ.
ReplyDeleteBhatre,
ReplyDeleteSuperrrrrrrrrrrr
thanks
ReplyDelete