ಆತ್ಮೀಯ ಬಂಧು, ನಮಸ್ಕಾರ, ವಿ.ಆರ್.ಭಟ್ ತಮಗೆ ಹೃತ್ಪೂರ್ವಕ ಸ್ವಾಗತವನ್ನು ಕೋರುತ್ತಿದ್ದೇನೆ

Friday, February 18, 2011

ಹೊತ್ತಿನ ಮಹತ್ವ


ಹೊತ್ತಿನ ಮಹತ್ವ

ಹೆತ್ತ ತಾಯಿ-ತಂದೆ ಹೊತ್ತ ಇಳೆಯನ್ನು
ಎತ್ತರಕೆ ಬೆಳೆಯಲುಪಕರಿಸಿದ ಗುರುಗಳನು
ಕತ್ತು ಬಾಗಿಸಿ ನಮಿಸು ಕಷ್ಟವೇನೇ ಇರಲಿ
ಮತ್ತೆ ಕರ್ತವ್ಯಮೆರೆ | ಜಗದಮಿತ್ರ

ಹೊತ್ತು ಮುತ್ತಿನ ಥರದ ಮೌಲ್ಯವುಳ್ಳದ್ದಿಹುದು
ತೆತ್ತು ಕಲಿತಂತಲ್ಲ ಮತ್ತೆ ಅದುಬರದು
ಬಿತ್ತ ಬೀಜವು ಬೆಳೆದು ಗಿಡವಾಗಿ ಮರವಾಗಿ
ಮತ್ತುದುರಿ ಬೀಳುವುದು | ಜಗದಮಿತ್ರ

ತುತ್ತ ತುದಿಯೇರಿ ನಿಂತಿಹೆನೆಂದು ಹಮ್ಮಿನಲಿ
ಸೊತ್ತು ವೈಭವ ನೆನೆದು ಮೆರೆಯಲದು ತರವೇ ?
ಹೊತ್ತೇ ಕುತ್ತುಗಳ ತಂದಿಡುತ ದೂಡ್ಕೆಡಹೆ

ತುತ್ತಿಗೂ ಕಷ್ಟವೈ | ಜಗದಮಿತ್ರ

ಹೊತ್ತಿನಲಿ ಕಾರ್ಯವನು ನಿಗದಿಯಲಿ ಮುಗಿಪರವಿ
ಹತ್ತಿ ಮೇಲೇರಿ ಕೆಳಗಿಳಿದು ತೋರುವನು
ಅತ್ತರೂ ಕರೆದರೂ ಬರದು ಕಳೆದಿಹ ಕಾಲ
ಮತ್ತೇಕೆ ತಡವಿನ್ನು ? ಜಗದಮಿತ್ರ


ಅತ್ತ ಮುಪ್ಪಿನಲೊಮ್ಮೆ ಮಾಡಿದಕೆ ಕಳವಳಿಸೆ
ಸುತ್ತ ಯಾರೂ ಬರರು ಬಲು ಕಠಿಣ ಸಹಿಸೆ !
ಬೆತ್ತದಾ ಹೊಡೆತವೂ ಅಷ್ಟು ನೋವಿನದಲ್ಲ
ಕತ್ತೆ ನೀನಾಗಪ್ಪೆ | ಜಗದಮಿತ್ರ

ಕತ್ತೂರಿ ಪರಿಮಳವು ಕತ್ತೆಗರಿವಾಗುವುದೇ?
ಮತ್ತದೇ ಹೊಲಸ್ಕಾಣೆ ನಗುವುದ್ಹಲ್ಕಿರಿದು
ಎತ್ತಣಿಂದೆತ್ತಣಕೂ ಸಮಯದರಿವಿನ ಬಗ್ಗೆ
ಎತ್ತಿ ಅನುಸರಿಸದನು | ಜಗದಮಿತ್ರ

ಬತ್ತಿದಾ ತೊರೆಗಳಲಿ ನೀರು ಉಕ್ಕಲೂಬಹುದು
ಕೊತ್ತಳದ ಕೋಟೆಯಲಿ ರಾಜ ದರ್ಬಾರು
ಎತ್ತರದ ಗೋಪುರಕೆ ಹತ್ತು ಸವಾಲುಗಳು
ಹೊತ್ತರಿದು ಮುನ್ನಡೆಯೋ | ಜಗದಮಿತ್ರ

5 comments:

  1. ಹೊತ್ತು ಮುತ್ತಿನ ಥರದ ಮೌಲ್ಯ... magggadante kaggavanu henedu..hottina mahatvava aruhida jagada mitranige namo namaha..

    ananth

    ReplyDelete
  2. ಭಟ್ಟರೆ, ಹೊತ್ತಿನ ಮಹತ್ವವನ್ನು ಸೊಗಸಾಗಿ ತಿಳಿಸಿದ್ದೀರಿ.

    ReplyDelete
  3. ಜಗದ ಮಿತ್ರರ ಪದಗಳು ಅತ್ಯುತ್ತಮವಾಗಿದೆ.. ಸಮಯದ ಮಹತ್ವ ಎಲ್ಲರೂ ಅರಿಯಬೇಕಾದ ವಿಷಯ ತಿಳಿಸಿದ್ದಕ್ಕೆ ಧನ್ಯವಾದಗಳು.

    ReplyDelete
  4. Bhattare,

    tumbaa dinagala nanthra blog kade barta iddini...kavana tumbaa chennagide, samayda mahatvavnnu tumbaa chennagi tilisiddiri sir...

    ReplyDelete
  5. ಸ್ಪಂದಿಸಿದ ಎಲ್ಲರಿಗೂ ಹಲವು ನೆನಕೆಗಳು.

    ಹೊಸದಾಗಿ ಬ್ಲಾಗಿಗೆ ಲಿಂಕಿಸಿಕೊಂಡ ಚಂದ್ರಿಕಾ ಹೆಗಡೆಯವರಿಗೆ ಸ್ವಾಗತ ಹಾಗೂ ನಮನ.

    ReplyDelete